Posts

Showing posts from 2018
Image
Image
ಒಳ್ಳೆಯ ಹೆಂಡತಿ ತನ್ನ ಗಂಡನಿಗೆ ತನ್ನ ಜೀವಮಾನವೆಲ್ಲಾ ಒಳ್ಳೆಯದನ್ನು ಮಾಡುವಳು . ಆಕೆ ಅವನಿಗೆಂದಿಗೂ ತೊಂದರೆ ಮಾಡುವುದಿಲ್ಲ . ಅವಳು ಬಟ್ಟೆ ತಯಾರಿಸಲು ಉಣ್ಣೆಯನ್ನು ಮತ್ತು ಸೆಣಬಿನ ನಾರನ್ನು ಯಾವಾಗಲೂ ಶೇಖರಿಸುವಳು . ವ್ಯಾಪಾರದ ಹಡಗುಗಳಂತೆ ದೂರದಿಂದ ಬೇಕಾದ ಆಹಾರವನ್ನು ಸಂತೋಷದಿಂದ ಮನೆಗೆ ತರುವಳು . ಇನ್ನೂ ಕತ್ತಲಿರುವಾಗಲೇ ಆಕೆ ಎದ್ದೇಳುವಳು . ಆಕೆ ತನ್ನ ಕುಟುಂಬದವರಿಗೂ ತನ್ನ ಸೇವಕಿಯರಿಗೂ ಊಟ ಕೊಡುವಳು . ಆಕೆ ಜಮೀನನ್ನು ಕೊಂಡುಕೊಳ್ಳುವಳು ; ತಾನು ಗಳಿಸಿದ ಹಣವನ್ನು ದ್ರಾಕ್ಷಿತೋಟಕ್ಕೆ ಉಪಯೋಗಿಸುವಳು . ಆಕೆ ತುಂಬ ಕಷ್ಟಪಟ್ಟು ಕೆಲಸಮಾಡುವಳು . ಆಕೆ ಬಲವಾಗಿದ್ದಾಳೆ ; ತನ್ನ ಕೆಲಸಗಳನ್ನೆಲ್ಲಾ ಮಾಡಲು   ಶಕ್ತಳಾಗಿದ್ದಾಳೆ . ಆಕೆ ತಾನು ತಯಾರಿಸಿದ ವಸ್ತುಗಳನ್ನು ಒಳ್ಳೆಯ ಲಾಭಕ್ಕೆ ಮಾರುವಳು . ರಾತ್ರಿ ಬಹುಹೊತ್ತಿನವರೆಗೂ ಆಕೆ ಕೆಲಸ ಮಾಡುವಳು . ಆಕೆ ತಾನೇ ದಾರವನ್ನು ತಯಾರಿಸುವಳು ; ತಾನೇ ಬಟ್ಟೆಯನ್ನು ನೇಯುವಳು . ಆಕೆ ಯಾವಾಗಲೂ ಬಡವರಿಗೆ ಕೊಡುವಳು ; ಕೊರತೆಯಲ್ಲಿರುವ ಜನರಿಗೆ ಸಹಾಯ ಮಾಡುವಳು . ಹಿಮ ಸುರಿಯುವಾಗ , ಆಕೆ ತನ್ನ ಕುಟುಂಬದ ಬಗ್ಗೆ ಚಿಂತಿಸಬೇಕಿಲ್ಲ ; ಆಕೆ ಅವರೆಲ್ಲರಿಗೆ ಬೆಚ್ಚಗಿರುವ ಬಟ್ಟೆಗಳನ್ನು ಕೊಟ್ಟಿದ್ದಾಳೆ . ಆಕೆ ಹೊದಿಕೆಗಳನ್ನು ತಯಾರಿಸುವಳು . ಆಕೆಯು ಶ್ರೇಷ್ಠವಾದ ನಾರಗಸೆಯ ದಾರದಿಂದ ಮಾಡಿದ ಬಟ್...